ಆರಂಭಕ್ಕೂ ಮುನ್ನವೇ ಜಿಲ್ಲಾ‌ ನುಡಿ ಜಾತ್ರೆಗೆ ಬಂತು ವಿಘ್ನ

Source Credit Oneindia.com

Chikkamagaluru

oi-Chetan BP

By ಚಿಕ್ಕಮಗಳೂರು ಪ್ರತಿನಿಧಿ

|

ಚಿಕ್ಕಮಗಳೂರು, ಜನವರಿ 03: ಕಾಫಿನಾಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇದೇ ಜನವರಿ 10ರಂದು ಶೃಂಗೇರಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಆದರೆ ಸಮ್ಮೇಳನದ ಆರಂಭಕ್ಕೂ ಮುನ್ನವೇ ಅಪಸ್ವರ ಕೇಳಿಬಂದಿದ್ದು, ಪ್ರತಿಭಟನೆ ನಡೆದಿದೆ.

ಇದಕ್ಕೆ ಕಾರಣ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವುದು. ಜಿಲ್ಲಾ ಸಾಹಿತ್ಯ ಪರಿಷತ್, ಮೂಲತಃ ಶೃಂಗೇರಿಯವರಾದ, “ಮಂಗನ ಬ್ಯಾಟೆ” ಕೃತಿಯ ಮೂಲಕ ಮಲೆನಾಡಿನ ಚಿತ್ರಣವನ್ನು ಸೊಗಸಾಗಿ ಬಿಂಬಿಸಿದ್ದ ಕಲ್ಕುಳಿ ವಿಠ್ಠಲ ಹೆಗಡೆ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದರೆ ಅವರನ್ನು ಆಯ್ಕೆ ಮಾಡಿರುವುದಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಮಂಗನ ಬ್ಯಾಟೆ” ಕೃತಿಯಲ್ಲಿ ವಿಠ್ಠಲ ಹೆಗಡೆ ಶೃಂಗೇರಿ ಮಠವನ್ನು ಅವಹೇಳನಕಾರಿಯಾಗಿ ಬಿಂಬಿಸಿದ್ದಾರೆ ಹಾಗೂ ಅವರು ನಕ್ಸಲ್ ಬೆಂಬಲಿಗ ಎಂಬ ಆರೋಪ ಇದೆ. ಹಾಗಾಗಿ ಈ ನಿರ್ಣಯಕ್ಕೆ ವಿರೋಧ ವ್ಯಕ್ತವಾಗಿದೆ. ಈ ಹಿಂದೆಯೂ ಇದೇ ಕಾರಣಕ್ಕೆ ವಿವಾದ ಉಂಟಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಆಯ್ಕೆಯ ಬಗ್ಗೆ ಗಮನಹರಿಸಿ ಪರಾಮರ್ಶೆ ಮಾಡಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಇದೀಗ ಸಮ್ಮೇಳನ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಶ್ರೀರಾಮ ಸೇನೆ, ಎಬಿವಿಪಿ, ಭಜರಂಗದಳ, ವಿಶ್ವ ಹಿಂದೂ ಪರಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಶೃಂಗೇರಿಯಲ್ಲಿ ನಕ್ಸಲ್ ವಿರೋಧಿ ಹೋರಾಟ ಸಮಿತಿ ಶೃಂಗೇರಿ ಪಟ್ಟಣದ ಬಸ್ ನಿಲ್ದಾಣದಿಂದ ಮಾರ್ಕೆಟ್ ವರೆಗೆ ಸಮ್ಮೇಳನ ಅಧ್ಯಕ್ಷರ ಬದಲಾವಣೆ ಮಾಡಿ ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಜನವರಿ 12ರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ

Fri Jan 3 , 2020
Source Credit Oneindia.com Pin it Email https://nirantharanews.com/%e0%b2%86%e0%b2%b0%e0%b2%82%e0%b2%ad%e0%b2%95%e0%b3%8d%e0%b2%95%e0%b3%82-%e0%b2%ae%e0%b3%81%e0%b2%a8%e0%b3%8d%e0%b2%a8%e0%b2%b5%e0%b3%87-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e2%80%8c/#Wg== Koppal oi-Gururaj S | Updated: Friday, January 3, 2020, 16:29 [IST] ಕೊಪ್ಪಳ, ಜನವರಿ 03 : ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿ 12, 13 ಮತ್ತು 14ರಂದು ಮೂರು ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆ ನಡೆಯಲಿದೆ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯನ್ನು ‘ದಕ್ಷಿಣ ಭಾರತದ ಕುಂಭಮೇಳ’ ಎಂದು ಕರೆಯಲಾಗುತ್ತದೆ. ಲಕ್ಷಾಂತರ ಜನರು ಮೂರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಶಿರಸಿ ಮಾರಿಕಾಂಬ ಜಾತ್ರೆ ಘೋಷಣೆ ಬೆನ್ನಲ್ಲೇ ದೇಗುಲ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links