“ಆ ಸಿಡಿ ರೆಡಿ ಮಾಡಲು ಇಷ್ಟು ದಿನ ಬೇಕಿತ್ತಾ”; ನಗುತ್ತಲೇ ತಿವಿದ ಡಿವಿಎಸ್

Source Credit Oneindia.com

Mandya

lekhaka-Lavakumar b m

|

ಮಂಡ್ಯ, ಜನವರಿ 11: ರಾಜಕೀಯದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿರವರು ಬಿಡುಗಡೆ ಮಾಡಿರುವ ವಿಡಿಯೋ ವಿಷಯವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಿ.ಡಿಗಳು ರಾಜಕೀಯದಲ್ಲಿರುವ ಹಲವರಿಗೆ ತಮ್ಮ ರಾಜಕೀಯದ ಅಸ್ತಿತ್ವದ ಸ್ವತ್ತುಗಳಾಗಿ ಪರಿವರ್ತನೆಯಾಗಿವೆ. ಯಾವುದೋ ಫೇಕ್ ಸಿಡಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡೋದು. ಆಮೇಲೆ ಅದರ ಹಿಂದೆ ಯಾರೂ ಹೋಗುವುದಿಲ್ಲ. ಕರ್ನಾಟಕದಲ್ಲಿ ಬಿಡುಗಡೆಯಾದ ಸಿಡಿಗಳ ಸಂಖ್ಯೆ ನೋಡಿದ್ರೆ ಇಷ್ಟು ಹೊತ್ತಿಗೆ ಅದೆಷ್ಟೋ ಜನರು ಜೈಲಿಗೆ ಹೋಗಬೇಕಿತ್ತು” ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಅಲ್ಲದೇ, “ಆ ಸಿಡಿ ರೆಡಿ ಮಾಡಲು ಇಷ್ಟು ದಿನ ಬೇಕಿತ್ತಾ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. “ಘಟನೆ ನಡೆದ ಕೆಲವು ದಿನಗಳಲ್ಲೇ ಸಿಡಿ ಬಿಡುಗಡೆ ಮಾಡಬಹುದಿತ್ತು. ಆದರೆ ತಮ್ಮ ರಾಜಕೀಯ ಮೆಟ್ಟಿಲು ಕುಸಿಯುತ್ತಿರುವ ಸಮಯದಲ್ಲಿ ಕುಮಾರಸ್ವಾಮಿ ಮಾಡುತ್ತಿರುವ ಕಾರ್ಯಾಚರಣೆ ಇದು. ಇದರ ಹಿಂದೆ ದೊಡ್ಡ ಹುನ್ನಾರವೇ ಅಡಗಿದೆ” ಎಂದರು.

ವಕೀಲರ ಭವನದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಕುರಿತು ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಗೂಟದ ಕಾರು ಬಿಟ್ಟು ಸ್ವಂತ ಕಾರಿನಲ್ಲಿ ಹೋದರೆ ಕೆಲವರಿಗೆ ನಿರಾಸೆಯಾಗುವುದು ಸಹಜ. ಅದರಂತೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ” ಎಂದರು.

ಸಂಪುಟ ರಚನೆ ವಿಚಾರವಾಗಿಯೂ ಮಾತನಾಡಿ, “ನಾವು ಅನರ್ಹರಾಗಿದ್ದ ಶಾಸಕರಿಗೆ ಮಾತು ಕೊಟ್ಟಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ. ವಿಸ್ತರಣೆಯ ಸಂಪೂರ್ಣ ಅಧಿಕಾರ ಸಿಎಂಗೆ ಬಿಟ್ಟಿದ್ದು” ಎನ್ನುವ ಮೂಲಕ ಎಲ್ಲಾ ನೂತನ ಶಾಸಕರಿಗೆ ಸಚಿವ ಸ್ಥಾನ ಸಿಗುವ ಕುರಿತಂತೆ ಪರೋಕ್ಷವಾಗಿ ಸುಳಿವು ನೀಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಮಂಗಳೂರು ಗಲಭೆ: ಪೊಲೀಸ್ ವೇಷ ಹಾಕಿಸಿ ಕುಮಾರಸ್ವಾಮಿ ಸಿಡಿ ರೆಡಿ ಮಾಡಿಸಿದ್ರಾ?

Sat Jan 11 , 2020
Source Credit Oneindia.com Pin it Email https://nirantharanews.com/%e0%b2%86-%e0%b2%b8%e0%b2%bf%e0%b2%a1%e0%b2%bf-%e0%b2%b0%e0%b3%86%e0%b2%a1%e0%b2%bf-%e0%b2%ae%e0%b2%be%e0%b2%a1%e0%b2%b2%e0%b3%81-%e0%b2%87%e0%b2%b7%e0%b3%8d%e0%b2%9f%e0%b3%81-%e0%b2%a6%e0%b2%bf/#Wg== Karnataka oi-Balaraj Tantri | Updated: Friday, January 10, 2020, 17:02 [IST] ಬೆಂಗಳೂರು, ಜ 10: ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. “ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ಹೆಚ್ಚಿನ ಮಾಹಿತಿ ನನಗಿಲ್ಲ. ಆದರೆ, ವಿಡಿಯೋ ಎನ್ನುವುದು ಕೆಲವರಿಗೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದೊಡ್ಡ ಸಾಧನವಾಗಿದೆ” ಎಂದು ಡಿವಿಎಸ್ ವ್ಯಂಗ್ಯವಾಡಿದ್ದಾರೆ. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links