ಎಚ್‌ಎಸ್‌ವಿಗೆ ಒಲಿದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ

Source Credit Oneindia.com

Karnataka

oi-Manjunath Bhadrashetti

|

ಬೆಂಗಳೂರು, ಡಿಸೆಂಬರ್ 4; ಹಿರಿಯ ಸಾಹಿತಿ ಡಾ.ಎಚ್ ಎಸ್ ವೆಂಕಟೇಶಮೂರ್ತಿ ಅವರು ಮುಂದಿನ ವರ್ಷ ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು. 2020 ಫೆಬ್ರುವರಿ 5, 6 ಮತ್ತು 7 ರಂದು ಶರಣರ ನಾಡು ಕಲಬುರಗಿಯಲ್ಲಿ, ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಸದ್ಯ ಬೆಂಗಳೂರಿನಲ್ಲಿ ನೆಲಸಿರುವ, ಕನ್ನಡದ ಪ್ರಮುಖ ಕವಿ, ಕಥೆಗಾರ, ನಾಟಕಕಾರ ಡಾ ಎಚ್ ಎಸ್ ವೆಂಕಟೇಶಮೂರ್ತಿ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದವರು. ತಂದೆ ನಾರಾಯಣ ಭಟ್ಟ್ರು, ತಾಯಿ ನಾಗರತ್ನಮ್ಮ.

76 ವಯಸ್ಸಿನ ಎಚ್ ಎಸ್ ವೆಂಕಟೇಶಮೂರ್ತಿ ಅವರು, ಕನ್ನಡ ಸಾರಸ್ವತ ಲೋಕದಲ್ಲಿ ಎಚ್‌ಎಸ್‌ವಿ ಮೇಷ್ಟ್ರು ಎಂದೇ ಜನಜನಿತರಾಗಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಪ್ ಕಾಮರ್ಸ್ ಕಾಲೇಜಿನಲ್ಲಿ ದಶಕಗಳ ಕಾಲ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ಕಟ್ಟುವ ಕಾಯಕದಲ್ಲಿ ಇಂದಿಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಈ ಹಿಂದೆ 1928 ರಲ್ಲಿ, 1949 ರಲ್ಲಿ ಹಾಗೂ 1987 ರಲ್ಲಿ ಕಲಬುರಗಿಯಲ್ಲಿ ಅಖಿಲ ಬಾರತ ಸಾಹಿತ್ಯ ಸಮ್ಮೇಳನ ನಡೆದಿದ್ದವು.. ಕಾರ್ಯಕಾರಿ ಸಮಿತಿ ಸಭೆಯನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

Niranthara News

Leave a Reply

Your email address will not be published. Required fields are marked *

Next Post

100% ಕೆ.ಆರ್.ಪೇಟೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಹಣ ಹಂಚುತ್ತಿದ್ದಾರೆ: ಆರೋಪ

Wed Dec 4 , 2019
Source Credit Oneindia.com Pin it Email https://nirantharanews.com/%e0%b2%8e%e0%b2%9a%e0%b3%8d%e2%80%8c%e0%b2%8e%e0%b2%b8%e0%b3%8d%e2%80%8c%e0%b2%b5%e0%b2%bf%e0%b2%97%e0%b3%86-%e0%b2%92%e0%b2%b2%e0%b2%bf%e0%b2%a6-85%e0%b2%a8%e0%b3%87-%e0%b2%95%e0%b2%a8%e0%b3%8d-2/#eGdfYXJyb3cuanB Hassan oi-Balaraj Tantri | Published: Wednesday, December 4, 2019, 17:59 [IST] ಹಾಸನ, ಡಿ 4: ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಮತದಾನ ನಾಳೆ (ಡಿ 5) ನಡೆಯಲಿದೆ. ಮೂರೂ ಪಕ್ಷಗಳು ಹಣ, ಇತರ ವಸ್ತುಗಳನ್ನು ಹಂಚುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ವಿರುದ್ದ ಗುರುತರ ಆರೋಪವನ್ನು ಮಾಡಿದ್ದಾರೆ. ಜೊತೆಗೆ, ಮೈಸೂರು ಐಜಿಪಿ ವಿರುದ್ದವೂ ಕಿಡಿಕಾರಿದ್ದಾರೆ. ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ದ ಎಫ್‌ಐಆರ್ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links