ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆ

Source Credit Oneindia.com

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಆತಂಕ

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಅರೇಬಿಕಾ ಕಾಫಿ ಹಣ್ಣಾಗಿದ್ದು ಮಳೆಯಿಂದ ಉದುರುವ ಆತಂಕ ಎದುರಾಗಿದೆ. ಮೈಸೂರು ನಗರದಲ್ಲಿ ಸಂಜೆಯಿಂದ ಅಲ್ಲಲ್ಲಿ ಸಾಧಾರಣ ಮಳೆ ಸುರಿದಿದೆ. ಮಂಡ್ಯ, ಹಾಸನದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು.

ತಮಿಳುನಾಡಿನಲ್ಲಿ ಪ್ರವಾಹ ಭೀತಿ

ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಗರಿಷ್ಠ 24.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.4 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 24.8 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 25.2 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದ ಎಲ್ಲೆಲ್ಲಿ ಮಳೆ?

ರಾಜ್ಯದ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಹಾವೇರಿ, ಕೊಡಗು ಸೇರಿ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಆಗಲಿದೆ.

Source Credit Oneindia.com

Niranthara News

Leave a Reply

Your email address will not be published. Required fields are marked *

Next Post

ಇಳಿಕೆಯಾದ ಈರುಳ್ಳಿ ಬೆಲೆ, ಗ್ರಾಹಕನ ನಿಟ್ಟುಸಿರು, ಸದ್ಯದ ದರವೆಷ್ಟು?

Wed Dec 4 , 2019
Source Credit Oneindia.com Pin it Email https://nirantharanews.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95%e0%b2%a6-%e0%b2%95%e0%b2%b0%e0%b2%be%e0%b2%b5%e0%b2%b3%e0%b2%bf-%e0%b2%ae%e0%b2%b2%e0%b3%86%e0%b2%a8%e0%b2%be%e0%b2%a1%e0%b3%81/#eG9uaW9uLTEtMTU ಇತ್ತೀಚಿಗೆ ಇರುಳ್ಳಿ ಬಳಕೆಯಲ್ಲಿ ಇಳಿಕೆಯಾಗಿತ್ತು ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಈರುಳ್ಳಿ ಬೆಲೆ ನಾಶವಾಗಿತ್ತು, ಆಗ ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಇರಲಿಲ್ಲ. ಈಗ ನಾಸಿಕ್ ನಿಂದ ಕರ್ನಾಟಕಕ್ಕೆ ಬರುತ್ತಿರುವುದರಿಂದ ದರದಲ್ಲಿ ಇಳಿಕೆ ಕಂಡಿದೆ. ಹದಿನೈದು ದಿನಗಳಿಂದ ಈರುಳ್ಳಿ ಖರೀದಿಸಲು ಹೋದಾಗ ಗ್ರಾಹಕರು ಬೆಚ್ಚಿಬಿದ್ದಿದ್ದರು. ಸಸ್ಯಾಹಾರಿ ಮತ್ತು ಮಾಂಸಾಹಾರಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯ ಅವಶ್ಯಕತೆ ಇರುವುದರಿಂದ ಸಾಮಾನ್ಯವಾಗಿ ಈರುಳ್ಳಿಗೆ ಯಾವಾಗಲೂ ಬೇಡಿಕೆ ಇದ್ದೇ ಇರುತ್ತದೆ. ಬೇಡಿಕೆ ತಕ್ಕುದಾಗಿ ಉತ್ಪಾದನೆ ಇಲ್ಲದಿದ್ದರೆ ಬೆಲೆ ಹೆಚ್ಚಾಗುವುದು ಖಚಿತ. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links