ಜಮೀನಿನಲ್ಲೇ ರೈತನಿಗೆ ಸನ್ಮಾನ ಮಾಡಿದ ಸಚಿವ ಸುರೇಶ ಕುಮಾರ್

Source Credit Oneindia.com

Dharwad

oi-Jyothi Devangamath

By ಧಾರವಾಡ ಪ್ರತಿನಿಧಿ

|

ಧಾರವಾಡ, ಡಿಸೆಂಬರ್ 23: ಧಾರವಾಡಕ್ಕೆ ಬರುವ ಮಾರ್ಗ ಮಧ್ಯೆ, ನೆಲೋಗಲ್ ಗ್ರಾಮದಲ್ಲಿ ರೈತರೊಬ್ಬರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ ಶಿಕ್ಷಣ ಸಚಿವ ಸುರೇಶ್ ಕುಮಾರ್.

ಸುರೇಶ್ ಕುಮಾರ್ ಅವರು ಧಾರವಾಡಕ್ಕೆ ಕಾರ್ಯಕ್ರಮದ ಸಲುವಾಗಿ ಆಗಮಿಸಿದ್ದು, ಇದೇ ಸಂದರ್ಭ, ಇಂದು ರೈತರ ದಿನವಾದ ಕಾರಣ, ನೆಲೋಗಲ್ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಚನ್ನಬಸವಣಗೌಡ ಹೊಂಬರಡಿಗೆ ಸನ್ಮಾನ ಮಾಡಿದರು. ಸನ್ಮಾನ ಮಾಡಿ ನಮಸ್ಕರಿಸಿದರು.

ಈ ಕುರಿತು ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲೂ ಹಂಚಿಕೊಂಡಿರುವ ಅವರು, “ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಈ ‘ಅನ್ನದಾತ’ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿ ಅವರಿಗೆ ‘ರೈತರ ದಿನ’ ದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ” ಎಂದು ಬರೆದುಕೊಂಡಿದ್ದಾರೆ. ಸಚಿವ ಸುರೇಶ್ ಕುಮಾರ್ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭ, ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಸಮಯವನ್ನೂ ಕಳೆದರು. ಕೈಯಲ್ಲಿ ಪುಸ್ತಕ ಹಿಡಿದು ಮಕ್ಕಳಿಗೆ ಪಾಠವನ್ನೂ ಮಾಡಿದರು. ಹಾಗೇ ಮಕ್ಕಳಿಗೆ ಪ್ರಶ್ನೆಗಳನ್ನು‌ ಕೇಳಿದರು.

“ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಸಮಯವನ್ನು ಹೊಂದಾಣಿಕೆ ಮಾಡಿಕೊಂಡು ಸತತವಾಗಿ ಅಭ್ಯಾಸ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು” ಎಂದು ಕಿವಿ ಮಾತು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಜ.17ರಿಂದ ಖಾಸಗಿ ಶಾಲಾ-ಕಾಲೇಜುಗಳು ಅನಿರ್ದಿಷ್ಟಾವಧಿಗೆ ಬಂದ್

Mon Dec 23 , 2019
Source Credit Oneindia.com Pin it Email https://nirantharanews.com/%e0%b2%9c%e0%b2%ae%e0%b3%80%e0%b2%a8%e0%b2%bf%e0%b2%a8%e0%b2%b2%e0%b3%8d%e0%b2%b2%e0%b3%87-%e0%b2%b0%e0%b3%88%e0%b2%a4%e0%b2%a8%e0%b2%bf%e0%b2%97%e0%b3%86-%e0%b2%b8%e0%b2%a8%e0%b3%8d%e0%b2%ae%e0%b2%be/#Wg== Karnataka oi-Gururaj S | Updated: Monday, December 23, 2019, 15:22 [IST] ಬೆಂಗಳೂರು, ಡಿಸೆಂಬರ್ 23 : ರಾಜ್ಯದಾದ್ಯಂತ ಖಾಸಗಿ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಮಾತುಕತೆಗೆ ಬರುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಾಧ್ಯಮಿಕ ನೌಕರರ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದೆ. ಆದ್ದರಿಂದ, ಜನವರಿ 17ರಿಂದ ರಾಜ್ಯದಾದ್ಯಂತ ಖಾಸಗಿ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲು ತೀರ್ಮಾನಿಸಿದೆ. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links