ಡಿಸಿಎಂ ಅಶ್ವತ್ಥನಾರಾಯಣ, ಮೈಸೂರು ಐಜಿಪಿಗೆ ಚುನಾವಣಾ ಆಯೋಗ ನೋಟಿಸ್

Source Credit Oneindia.com

Karnataka

oi-Amith

|

ಬೆಂಗಳೂರು, ಡಿಸೆಂಬರ್ 5: ಮಂಡ್ಯದ ಕೆಆರ್ ಪೇಟೆಯ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕೆ ಮೈಸೂರು ಐಜಿಪಿ ನೆರವು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮೈಸೂರು ಐಜಿಪಿ ವಿಪುಲ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಚುನಾವಣಾ ಆಯೋಗದಿಂದ ಬುಧವಾರ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿದೆ.

ಮೈಸೂರು ಐಜಿಪಿ ವಿಪುಲ್ ಕುಮಾರ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಆರೋಪಿಸಿದ್ದರು.

‘ಕೆ.ಆರ್.ಪೇಟೆ ಗಡಿ ದಡದಳ್ಳಿ ಎನ್ನುವಲ್ಲಿ ಖುದ್ದಾಗಿ ಡಿಸಿಎಂ ಹಣ ಹಂಚಿದ್ದಾರೆ. ಅಲ್ಲೇ ವಾಸ್ತವ್ಯ ಹೂಡಿ, ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ. ಐಜಿಪಿ ಇದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ’ ಎಂದು ರೇವಣ್ಣ ಆರೋಪಿಸಿದ್ದರು.

‘ಮೈಸೂರು ಐಜಿಪಿ, ಎಲ್ಲಾ ಪೊಲೀಸ್ ಭದ್ರತೆಗಳನ್ನು ನೀಡಿ, ಅಶ್ವಥ್ ನಾರಾಯಣ ಅವರಿಗೆ ದುಡ್ಡು ಹಂಚುವ ಕೆಲಸಕ್ಕೆ ಸಹಾಯ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರನ್ನು ಬೆದರಿಸುವ ಕೆಲಸವನ್ನೂ ಮಾಡುತಿದ್ದಾರೆ. ನನ್ನ ಮಗನ ಮೇಲೆ ಸುಳ್ಳು ಆರೋಪವನ್ನು ಹೊರಿಸಿ ಎ1 ಆರೋಪಿಯನ್ನಾಗಿ ಮಾಡಲಾಗಿದೆ. ಕೂಡಲೇ ಐಜಿಪಿಯನ್ನು ಬದಲಾಯಿಸಬೇಕು. ಇಲ್ಲದಿದ್ದರೆ, ನ್ಯಾಯಯುತ ಚುನಾವಣೆ ನಡೆಯಲು ಸಾಧ್ಯವಿಲ್ಲ’ ಎಂದು ರೇವಣ್ಣ, ಆಯೋಗಕ್ಕೆ ಮನವಿ ಮಾಡಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

Niranthara News

Leave a Reply

Your email address will not be published. Required fields are marked *

Next Post

ಮುಂದೆಯೂ ನಮ್ಮದೇ ಸರ್ಕಾರ, ರೈತಪರ ಬಜೆಟ್ ಖಂಡಿತ; ಬಿಎಸ್ ವೈ

Thu Dec 5 , 2019
Source Credit Oneindia.com Pin it Email https://nirantharanews.com/%e0%b2%a1%e0%b2%bf%e0%b2%b8%e0%b2%bf%e0%b2%8e%e0%b2%82-%e0%b2%85%e0%b2%b6%e0%b3%8d%e0%b2%b5%e0%b2%a4%e0%b3%8d%e0%b2%a5%e0%b2%a8%e0%b2%be%e0%b2%b0%e0%b2%be%e0%b2%af%e0%b2%a3-%e0%b2%ae%e0%b3%88/#Wg== Hubballi oi-Jyothi Devangamath By ಹುಬ್ಬಳ್ಳಿ ಪ್ರತಿನಿಧಿ | Published: Tuesday, December 3, 2019, 11:57 [IST] ಹುಬ್ಬಳ್ಳಿ, ಡಿಸೆಂಬರ್ 3: “15 ಕ್ಷೇತ್ರದಲ್ಲಿ ಬಿಜೆಪಿ ಅಲೆಯಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನವರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮುಂದೆಯೂ ನಾವೇ ಗೆದ್ದು, ಸ್ಥಿರ ಸರ್ಕಾರ ನೀಡುತ್ತೇವೆ” ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, “ಇಂದು ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಹದಿನೈದು ಕ್ಷೇತ್ರಗಳಲ್ಲಿ ಬಿಜೆಪಿ ಪರ ಅಲೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links