ಪಾರ್ಕಿಂಗ್ ಗಾಗಿ ಪ್ರತಿಭಟನೆಗಿಳಿದ ಬೈನರಿ ಗಾರ್ಮೆಂಟ್ಸ್ ಕಾರ್ಮಿಕರು

Source Credit Oneindia.com

Chitradurga

oi-Chidananda M

By ಚಿತ್ರದುರ್ಗ ಪ್ರತಿನಿಧಿ

|

ಚಿತ್ರದುರ್ಗ, ಜನವರಿ 4: ಗಾರ್ಮೆಂಟ್ಸ್ ನಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸಾವಿರಾರು ಕಾರ್ಮಿಕರು ಜಿಲ್ಲೆಯ ಬೈನರಿ ಫ್ಯಾಕ್ಟರಿ ಮುಂದೆ ಏಕಾಏಕಿ ಪ್ರತಿಭಟನೆಗಿಳಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬೆಂಗಳೂರು ರಸ್ತೆಯಲ್ಲಿರುವ ಕೆ.ಆರ್ ಹಳ್ಳಿ ಗೇಟ್ ಸಮೀಪದ ಬೈನರಿ ಗಾರ್ಮೆಂಟ್ಸ್ ಮುಂಭಾಗದಲ್ಲಿ, ಕಾರ್ಮಿಕರ ಆಟೋ, ಬಸ್ಸ್, ಕಾರು, ಟ್ಯಾಕ್ಸಿ ಮತ್ತಿತರ ವಾಹನಗಳಿಗೆ ಪಾರ್ಕಿಂಗ್ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಕಾರ್ಮಿಕರ ವಾಹನಗಳನ್ನು ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದ ಓಡಾಡುವವರಿಗೆ ತೊಂದರೆಯಾಗುತ್ತದೆ. ಹಾಗಾಗಿ ವಾಹನಗಳನ್ನು ಸೂಕ್ತ ಸ್ಥಳದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಿಕೊಡಬೇಕೆಂದು ಗಾರ್ಮೆಂಟ್ಸ್ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಡಿ.ಜಿ. ಪರಮೇಶ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಗಾರ್ಮೆಂಟ್ಸ್ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು. ಸಮಸ್ಯೆಯನ್ನು ಮೂರು ದಿನದ ಒಳಗೆ ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಎಚ್ಚರಿಸಿದ್ದು, ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಟ್ಟರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು ಪ್ರಾಣಾಪಾಯದಿಂದ ಪಾರಾದ ಚಾಲಕ

Sat Jan 4 , 2020
Source Credit TheMangaloreMirror.in ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾರು ಪ್ರಾಣಾಪಾಯದಿಂದ ಪಾರಾದ ಚಾಲಕ ಮಂಗಳೂರು ಜನವರಿ 4: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಹೊತ್ತಿ ಉರಿದು, ಚಾಲಕ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಡ್ಡೇಲು ಎಂಬಲ್ಲಿ ನಡೆದಿದೆ. Pin it Email https://nirantharanews.com/%e0%b2%aa%e0%b2%be%e0%b2%b0%e0%b3%8d%e0%b2%95%e0%b2%bf%e0%b2%82%e0%b2%97%e0%b3%8d-%e0%b2%97%e0%b2%be%e0%b2%97%e0%b2%bf-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ad%e0%b2%9f%e0%b2%a8%e0%b3%86/#V2hhdHNBcHAtSW1 ಇಲ್ಲಿನ ರಾಮಕುಂಜ ನಿವಾಸಿ ಪ್ರವೀಣ್ ಡಿ’ಸೋಜಾ ಬೆಂಗಳೂರಿನಿಂದ ರಾಮಕುಂಜದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ವಾಹನದಲ್ಲಿ ಹೊಗೆ ಆವರಿಸಿರುವುದನ್ನು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links