ಪುಣ್ಯಕ್ಷೇತ್ರದ ಮದುವೆಗಳಿಗೆ ಪುನೀತ್, ಯಶ್ ದಂಪತಿ ರಾಯಭಾರಿ

Source Credit Oneindia.com

Karwar

oi-Devaraj Naik

|

ಕಾರವಾರ, ಡಿಸೆಂಬರ್ 26: ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್ ರಾಜಕುಮಾರ್ ಹಾಗೂ ಯಶ್ ದಂಪತಿ ರಾಯಭಾರಿಗಳಾಗಿದ್ದಾರೆ.

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ‘ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇದಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗಡೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಸಚಿವರು, ಮಠಾಧೀಶರು, ಗಣ್ಯರು ಖುದ್ದು ಈ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಹೆಚ್ಚಿನ ಆದಾಯವಿರುವ 16ಎ ದರ್ಜೆಯ ದೇವಾಲಯಗಳಲ್ಲಿ ಕಲ್ಯಾಣ ಮಂಟಪ, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳಿರುವ ದೇವಾಲಯಗಳಲ್ಲಿ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ಶ್ರೀಮಾರಿಕಾಂಬ ದೇವಾಲಯ, ಹೊನ್ನಾವರ ತಾಲೂಕು ಇಡಗುಂಜಿ ವಿನಾಯಕ ದೇವಾಲಯ ಹಾಗೂ ಭಟ್ಕಳ ತಾಲೂಕು ಶಿರಾಲಿ ಅಳ್ವೆಕೋಡಿಯ ಶ್ರೀದುರ್ಗಾಪರಮೇಶ್ವರಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಇನ್ನೂ ಹೆಚ್ಚಿನ ದೇವಾಲಯಗಳಲ್ಲಿ ವಿವಾಹ ನಡೆಸಲು ಅವಕಾಶವಿದ್ದಲ್ಲಿ ಸರ್ಕಾರದ ಗಮನಕ್ಕೆ ತರಬೇಕು. ಪ್ರಸ್ತುತ ಸದರಿ ದೇವಾಲಯಗಳಲ್ಲಿ ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಷರತ್ತಿಗನುಗುಣವಾಗಿ ಅರ್ಜಿ ಸಲ್ಲಿಸಲು ಪ್ರೇರೇಪಿಸಬೇಕು’ ಎಂದು ಅವರು ತಿಳಿಸಿದರು.

ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಈ ಯೋಜನೆಗೆ ಸೆಲೆಬ್ರಿಟಿಗಳಾದ ಪುನೀತ್ ರಾಜಕುಮಾರ್ ಹಾಗೂ ಯಶ್ ದಂಪತಿ ಹಾಗೂ ಸುಧಾಮೂರ್ತಿ ರಾಯಭಾರಿಗಳಾಗುವುದಾಗಿ ಮಾಹಿತಿ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಮಂಗಳೂರು ಗಲಭೆಯಲ್ಲಿ ಶಾಂತಿ ಕಾಪಾಡಲು ಶ್ರಮಿಸಿದ ಪೊಲೀಸರಿಗೆ 10 ಲಕ್ಷ ನಗದು ಪುರಸ್ಕಾರ

Thu Dec 26 , 2019
Source Credit TheMangaloreMirror.in ಮಂಗಳೂರು ಗಲಭೆಯಲ್ಲಿ ಶಾಂತಿ ಕಾಪಾಡಲು ಶ್ರಮಿಸಿದ ಪೊಲೀಸರಿಗೆ 10 ಲಕ್ಷ ನಗದು ಪುರಸ್ಕಾರ ಮಂಗಳೂರು ಡಿಸೆಂಬರ್ 26: ಮಂಗಳೂರಿನಲ್ಲಿ ಪೌರತ್ವ ಕಾಯಿದೆ‌ ವಿರೋಧಿಸಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ ಪೋಲೀಸರಿಗೆ ಮಂಗಳೂರು ಪೋಲೀಸ್ ಕಮಿಷನರ್ 10 ಲಕ್ಷ ರೂಪಾಯಿಗಳ ನಗದು ಬಹುಮಾನ ಘೋಷಿಸಿದ್ದಾರೆ.ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಪೋಲೀಸರು ತಮ್ಮ ಜೀವವನ್ನೇ ಪಣವಾಗಿಸಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಿರುವ ಕಾರಣಕ್ಕಾಗಿ ಈ ನಗದು ಬಹುಮಾನವನ್ನು ಫೋಷಿಸಲಾಗಿದೆ. Pin it Email https://nirantharanews.com/%e0%b2%aa%e0%b3%81%e0%b2%a3%e0%b3%8d%e0%b2%af%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%a6-%e0%b2%ae%e0%b2%a6%e0%b3%81%e0%b2%b5%e0%b3%86%e0%b2%97%e0%b2%b3%e0%b2%bf%e0%b2%97/#V2hhdHNBcHAtSW1 ಪ್ರತಿಭಟನಾಕಾರರ ಕಲ್ಲು ತೂರಾಟದಿಂದ ಕಾಲಿನ ಮೂಳೆ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links