ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದ ಚನ್ನವೀರ ಕಣವಿ

Source Credit Oneindia.com

Dharwad

oi-Gururaj S

|

ಧಾರವಾಡ, ಜನವರಿ 03 : ಪೌರತ್ವ ತಿದ್ದುಪಡಿ ಕಾಯ್ದೆಗೆ ಹಿರಿಯ ಕವಿ ಚನ್ನವೀರ ಕಣವಿ ವಿರೋಧ ವ್ಯಕ್ತಪಡಿಸಿದ್ದಾರೆ. “ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಇದನ್ನು ಕೈಬಿಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಕೈ ಬಿಡಬೇಕು. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದಿರುವ ದೌರ್ಜನ್ಯದ ಕುರಿತ ಸಾರ್ವಜನಿಕ ದೂರುಗಳನ್ನು ವಿಚಾರಣೆ ನಡೆಸಬೇಕು” ಎಂದು ಚನ್ನವೀರ ಕಣವಿ ಒತ್ತಾಯಿಸಿದ್ದಾರೆ.

“ದೇಶಕ್ಕೆ ಸಮೃದ್ಧಿ ತರಲು ಸಾಮಾಜಿಕ ಸೌಹಾರ್ದತೆ ಅತ್ಯಗತ್ಯವಾಗಿದೆ. ಅಶಾಂತಿ, ಕೋಮು ಬಿಕ್ಕಟ್ಟು, ಕ್ಷೋಭೆ, ಭವಿಷ್ಯದ ಬಗ್ಗೆ ಚಿಂತೆ ಇತ್ಯಾದಿಗಳನ್ನು ಉತ್ಪಾದಿಸುವ ಕಾನೂನುಗಳನ್ನು ಪ್ರಗತಿ ವಿರೋಧಿ ಹಾಗೂ ಜನ ವಿರೋಧಿ ಎಂದೇ ಭಾವಿಸಬಹುದು” ಎಂದು ಹೇಳಿದ್ದಾರೆ.

“ಎಲ್ಲಾ ಜಾತಿ, ಮತ, ಪಂಥಗಳನ್ನೂ ಮೀರಿದ ಸಂತರಿಂದ ಅನುಭಾವಿಗಳಿಂದ ನಮ್ಮ ಆಧ್ಮಾತ್ಮಿಕ ಜಗತ್ತು ಅದೇ ರೀತಿ ಸಾಹಿತ್ಯ, ಸಂಗೀತ, ಕಲಾ ಪ್ರಪಂಚ ಸಂಪದ್ಭರಿತವಾಗಿದೆ. ಜಾತಿ, ಮತಗಳ ಭಾವನೆಯ ಬೀಜ ಬಿತ್ತುವುದು ನಮ್ಮ ಪರಂಪರೆಗೆ ಬಗೆಯುವ ದ್ರೋಹ” ಎಂದು ಕಣವಿ ವ್ಯಾಖ್ಯಾನಿಸಿದ್ದಾರೆ.

“ಸದ್ಯ ದೇಶದಲ್ಲಿ ಅಶಾಂತಿ, ಹಾಹಾಕಾರ ಉಂಟು ಮಾಡಿದ ಪೌರತ್ವ ಸಂಬಂಧಿತ ಎಲ್ಲಾ ಕಾನೂನು, ಕಾರ್ಯಕ್ರಮಗಳನ್ನು ಕೈ ಬಿಟ್ಟು ಸರ್ಕಾರ ಮತ್ತು ರಾಜಕೀಯ ಧುರೀಣರು ಸಾಮಾಜಿಕ ಸಾಮರಸ್ಯ ಸ್ಥಾಪಿಸಲು ಶ್ರಮಿಸಬೇಕು” ಎಂದು ಕರೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದ ಹಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿದೆ. ಕರ್ನಾಟಕದಲ್ಲಿಯೂ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಹೊಸ ವರ್ಷದ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಹೂವಿನ ಅಲಂಕಾರ

Fri Jan 3 , 2020
Source Credit TheMangaloreMirror.in ಹೊಸ ವರ್ಷದ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಹೂವಿನ ಅಲಂಕಾರ ಮಂಗಳೂರು ಜನವರಿ 3: ಹೊಸ ವರ್ಷದ ಪ್ರಯುಕ್ತ ಬೆಂಗಳೂರಿನ ಕುಟುಂಬವೊಂದು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಮಾಡಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಚಂದ್ರ ಲೇ ಔಟ್ ನಿವಾಸಿಗಳಾದ ಸಾಯಿ ಶರವಣ, ಎಸ್. ಗೋಪಾಲ್ ರಾವ್, ಮಂಜುನಾಥ ರಾವ್, ಆನಂದ್ ಜೊತೆಗೂಡಿ ಕಳೆದ 20 ವರ್ಷಗಳಿಂದ ಹೊಸ ವರ್ಷಕ್ಕೆ ಮಂಜುನಾಥನ ದರ್ಶನಕ್ಕಾಗಿ ಆಗಮಿಸುತ್ತಿದ್ದರು. Pin it Email https://nirantharanews.com/%e0%b2%aa%e0%b3%8c%e0%b2%b0%e0%b2%a4%e0%b3%8d%e0%b2%b5-%e0%b2%a4%e0%b2%bf%e0%b2%a6%e0%b3%8d%e0%b2%a6%e0%b3%81%e0%b2%aa%e0%b2%a1%e0%b2%bf-%e0%b2%95%e0%b2%be%e0%b2%af%e0%b3%8d%e0%b2%a6%e0%b3%86-4/#V2hhdHNBcHAtSW1 ಈ ನಡುವೆ ಕಳೆದ 12 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links