ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ: ಸಿಂಧೂ ರೂಪೇಶ್

Source Credit NewsKannada.com

ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ: ಸಿಂಧೂ ರೂಪೇಶ್


GK
  ¦   


Jan 05, 2020 04:58:29 PM (IST)

ಸುಳ್ಯ: ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದ ಆರಂಭ ಆಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ  ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ನಡೆದ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದ್ದೀರಿ ಎಂದು ಅವರು ಪ್ರಶಂಸಿದರು.

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಅವರು ಬಿಡುಗಡೆಗೊಳಿಸಿದರು. ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು. ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣ ಎಂದು ಭಾವಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಆಸ್ಥೆ ವಹಿಸಬೇಕು ಎಂದು ಅವರು ಹೇಳಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣ ಆರ್,  ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮಾಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ  ಡಾ.ರಾಮಕೃಷ್ಣ ರಾವ್, ಎ.ಪಿ.ಎಂ.ಸಿ. ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ  ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು. ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆಲರ್ಂಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಸಂಘದ ಪ್ರಧಾನ ಕಾರ್ಯದರ್ಶಿ  ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಕಳೆದ ಬಾರಿ ಗ್ರಾಮ ವಾಸ್ತವ್ಯ ನಡೆದ ಕುತ್ಲೂರಿನ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಅವರನ್ನು ಗೌರವಿಸಲಾಯಿತು. ರಾಮಚಂದ್ರ ಭಟ್ ಅನುಭವ ವ್ಯಕ್ತಪಡಿಸಿದರು.

ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಅನುದಾನಕ್ಕೆ ಸಿಎಂ ಗೆ ಮನವಿ-ಯು.ಟಿ.ಖಾದರ್

ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಮಡಪ್ಪಾಡಿಯಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು, ರಸ್ತೆ ದುಸ್ಥಿತಿಯನ್ನು ನಾನೇ ಕಣ್ಣಾರೆ ಅರಿತುಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ತೀರಾ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ರಸ್ತೆಗಳಿಲ್ಲ. ಕೆ.ಎಸ್.ಈಶ್ವರಪ್ಪರೊಂದಿಗೆ ನಾನೇ ಅನುದಾನ ತರಿಸಿದ್ದೇನೆ. ಇಲ್ಲಿಗೂ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ, ಈಶ್ವರಪ್ಪರೊಂದಿಗೆ ಶಾಸಕರ ಜತೆ ಸೇರಿ ಮಾತನಾಡುತ್ತೇನೆ ಎಂದು ಖಾದರ್ ಹೇಳಿದರು.

ಗ್ರಾಮ ವಾಸ್ತವ್ಯದ ಮೂಲಕ ಒಂದೇ ದಿನದಲ್ಲಿ ಮ್ಯಾಜಿಕ್ ನಡೆಯುತ್ತದೆ ಎಂದು ಗ್ರಾಮಸ್ಥರು ಭಾವಿಸಬಾರದು. ಆದರೆ ಅಧಿಕಾರಿಗಳು ಜನರ ಬೇಡಿಕೆಯ ಬೆನ್ನು ಬಿದ್ದು ಕೆಲಸ ಆಗುವಂತೆ ನೋಡಿಕೊಳ್ಳಬೇಕು ಎಂದು ಖಾದರ್ ಹೇಳಿದರು.

Source Credit NewsKannada.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಗಲು ಕನಸಾಗಿಯೇ ಉಳಿಯುವುದೇ?

Sun Jan 5 , 2020
Source Credit NewsKannada.com ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಗಲು ಕನಸಾಗಿಯೇ ಉಳಿಯುವುದೇ? Deepak Atavale   ¦    Jan 05, 2020 04:22:33 PM (IST) Pin it Email https://nirantharanews.com/%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%af%e0%b3%8a%e0%b2%82%e0%b2%a6%e0%b3%81-%e0%b2%97%e0%b3%8d%e0%b2%b0%e0%b2%be%e0%b2%ae-%e0%b2%85%e0%b2%ad%e0%b2%bf%e0%b2%b5%e0%b3%83%e0%b2%a6%e0%b3%8d/#YnRnaGlnaHdheV9 ಬೆಳ್ತಂಗಡಿ: ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಪೈಕಿ ಮಂಗಳೂರಿನಿಂದ-ತುಮಕೂರುವರೆಗೆ ಹಾದು ಹೋಗುವ ಹೆದ್ದಾರಿಯೂ( ರಾ.ಹೆ.73) ಒಂದು. ಇದು ಬೆಳ್ತಂಗಡಿ ತಾಲೂಕಿನಲ್ಲಿಯೂ ಹಾದು ಹೋಗುತ್ತದೆ.  ಪುಂಜಾಲಕಟ್ಟೆಯಿಂದ ಎತ್ತರದ ಚಾರ್ಮಾಡಿ ಕಣಿವೆ ರಸ್ತೆಯ ಅಣ್ಣಪ್ಪ ಗುಡಿಯ ತನಕ ಸುಮಾರು 45 ಕಿ.ಮೀ. ಉದ್ದವಿದೆ. ಈ ರಸ್ತೆಯಲ್ಲಿ ಅತ್ಯಂತ ಹೆಚ್ಚಿನ, ದುರ್ಗಮ ಸಂಚಾರ ಇರುವುದು […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links