“ಪ್ರಾಣಿ ಬಲಿ”ಯಿಂದ ದೂರ ಈ ಚಿಕ್ಕಲ್ಲೂರು ಜಾತ್ರೆ

Source Credit Oneindia.com

ಐದು ದಿನಗಳ ಕಾಲ ನಡೆಯುವ ಜಾತ್ರೆ

ಕೊಳ್ಳೆಗಾಲ ಪಟ್ಟಣದಿಂದ 26 ಕಿ.ಮೀ ದೂರದಲ್ಲಿರುವ ಚಿಕ್ಕಲ್ಲೂರಿನಲ್ಲಿ ಪ್ರತಿ ವರ್ಷವೂ ಐದು ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಈ ಬಾರಿ ಜನವರಿ 10 ರಿಂದ ಜಾತ್ರೆ ಆರಂಭವಾಗಿ 15ರವರೆಗೆ ನಡೆಯಲಿದೆ. ಇಲ್ಲಿನ ದೇಗುಲಕ್ಕೆ ಸುಮಾರು ಆರು ಕಿ.ಮೀ. ದೂರದಲ್ಲಿ ಕಾವೇರಿ ನದಿ ಹರಿಯುತ್ತದೆ. ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸಲು ಭಕ್ತರು ಇಲ್ಲಿಗೆ ಬರುತ್ತಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲದೆ, ಹೊರ ಜಿಲ್ಲೆ, ರಾಜ್ಯಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ.

ಮಂಟೇಸ್ವಾಮಿಗಳ ಶಿಷ್ಯ ನೆಲೆಸಿದ್ದ ತಾಣ

ಮಾದೇಶ್ವರರ ಸಮಕಾಲೀನರಾದ ಮಂಟೇಸ್ವಾಮಿಗಳ ಶಿಷ್ಯ ಸಿದ್ದಪ್ಪಾಜಿ ದೇವರು ನೆಲೆಸಿದ ತಾಣ ಚಿಕ್ಕನಲ್ಲೂರಾಗಿದ್ದು ಇಲ್ಲಿ ಸಿದ್ದಪ್ಪಾಜಿಗೆ ದೇಗುಲ ಕಟ್ಟಿ ಪೂಜಾ ಕೈಂಕರ್ಯಗಳನ್ನು ನಡೆಸಲಾಗುತ್ತದೆ. ವರ್ಷಕ್ಕೊಮ್ಮೆ ಐದು ದಿನಗಳ ಜಾತ್ರೆಯನ್ನು ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಜಾತ್ರೆಯಲ್ಲಿ ಮೊದಲ ದಿನ ಚಂದ್ರ ಮಂಡಲ, ಎರಡನೇ ದಿನ ದೊಡ್ಡವರ ಸೇವೆ, ಮೂರನೇ ದಿನ ಮುಡಿಸೇವೆ, ನಾಲ್ಕನೇ ದಿನ ಸಿದ್ದರ ಸೇವೆ (ಪಂಕ್ತಿ ಸೇವೆ) ಐದನೇ ದಿನ ಮುತ್ತತ್ತಿರಾಯನ ಸೇವೆಗಳು ನಡೆಯುತ್ತವೆ.

ಕೋಳಿ, ಕುರಿ, ಮೇಕೆ ವಶಪಡಿಸಿಕೊಂಡಿದ್ದ ಪೊಲೀಸರು

ಐದನೇ ದಿನ ದೇವರಿಗೆ ಪ್ರಾಣಿ ಬಲಿ ನೀಡಿ ಬಳಿಕ ಅಲ್ಲಿಯೇ ಅಡುಗೆ ಮಾಡಿ ಪಂಕ್ತಿಯಲ್ಲಿ ಕುಳಿತು ಮಾಂಸಾಹಾರ ಸೇವಿಸುವ ಸಂಪ್ರದಾಯ ಹಿಂದೆ ಇತ್ತು. ಆ ನಂತರ ತಡೆಯೊಡ್ಡಿದ್ದರೂ 2017ರಲ್ಲಿ ದೇಗುಲದಿಂದ ಒಂದು ಕಿ.ಮೀ. ದೂರದಲ್ಲಿ ಭಕ್ತರು ಪಂಕ್ತಿಯಲ್ಲಿ ಕುಳಿತು ಮಾಂಸದೂಟ ಮಾಡುವ ಮೂಲಕ ಸಂಭ್ರಮಿಸಿದ್ದರು. ಇದಾದ ಬಳಿಕ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಪೊಲೀಸರು ಅರ್ಧ ದಾರಿಯಲ್ಲಿಯೇ ಭಕ್ತರನ್ನು ತಪಾಸಣೆ ನಡೆಸಿ ಕೋಳಿ, ಕುರಿ, ಮೇಕೆಗಳನ್ನು ವಶಪಡಿಸಿಕೊಂಡು ಜಾತ್ರೆ ಮುಗಿದ ಬಳಿಕ ಬಿಟ್ಟು ಕಳುಹಿಸಿದ್ದರು. ಆದ್ದರಿಂದ ಜಾತ್ರೆ ಸಂದರ್ಭ ಲಿಂಗೈಕ್ಯ ಸಿದ್ದಪ್ಪಾಜಿ ಗದ್ದುಗೆಗೆ ಕಜ್ಜಾಯ, ಕಡಲೆಪುರಿ ಅರ್ಪಿಸುತ್ತಾರೆ. ದೇವಾಲಯದ ಮುಂದೆ ಹಾಗೂ ಚಂದ್ರಮಂಡಲದ ಕಟ್ಟೆಯಲ್ಲಿ ಕಾಯಿ ಒಡೆದು, ಧೂಪ, ದೀಪ ಬೆಳಗಿ ಪೂಜೆ ಸಲ್ಲಿಸುತ್ತಾರೆ.

ಮೆರವಣಿಗೆಯೊಂದಿಗೆ ಜಾತ್ರೆಗೆ ತೆರೆ

ಹುಲಿವಾಹನವನ್ನು ಹೂವಿನಿಂದ ಅಲಕರಿಸಿ, ಮಠದ ಬಸವನನ್ನು ಮುಂದೆ ಬಿಟ್ಟುಕೊಂಡು ಸತ್ತಿಗೆ ಸೂರಪಾನಿ, ಕೊಂಬುಕಹಳೆ, ಜಾಗಟೆ, ತಮಟೆಯೊಂದಿಗೆ ದೇವಾಲಯದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ವಿಭೂತಿ ಧರಿಸಿ ಸಿದ್ದಪ್ಪಾಜಿ ಸೇವೆ ಮಾಡುವ ನೀಲಗಾರರು ಕೊನೆಯ ದಿನ ನಾಮಧರಿಸಿ ಮುತ್ತತ್ತಿರಾಯನ ಸೇವೆಯನ್ನು ಮಾಡುವುದರೊಂದಿಗೆ ಜಾತ್ರೆಗೆ ತೆರೆ ಎಳೆಯಲಾಗುತ್ತದೆ.

ಇತರೆ ಕಡೆಗಳಲ್ಲಿ ನಡೆಯುವ ಜಾತ್ರೆಗಳಿಗೆ ಹೋಲಿಸಿದರೆ ಚಿಕ್ಕಲ್ಲೂರು ಜಾತ್ರೆ ವಿಭಿನ್ನ ಮತ್ತು ವಿಶಿಷ್ಟ. ಹೀಗಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಕ್ರಮ ಕೈಗೊಂಡಿದೆ.

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಉಡುಪಿ ಜೆಡಿಎಸ್ ವಕ್ತಾರ ಆತ್ಮಹತ್ಯೆಗೆ ಶರಣು

Sat Jan 4 , 2020
Source Credit NewsKannada.com YK   ¦    Jan 04, 2020 10:34:57 AM (IST) ಉಡುಪಿ: ಜಿಲ್ಲಾ ಜೆಡಿಎಸ್ ವಕ್ತಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ. ಆರ್ಥಿಕ ಸಮಸ್ಯೆಯಿಂಧ ವರು ಆತ್ಮಹ್ತಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪ್ರದೀಪ್ ಜಿ ಬೈಲೂರು(37) ಎಂದು ಗುರುತಿಸಲಾಗಿದೆ. ತಂದೆ-ತಾಯಿ ತೀರ್ಥಹಳ್ಳಿಗೆ ತೆರಳಿದ್ದ ವೇಳೆ ಪ್ರದೀಪ್ ತನ್ನ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Source Credit NewsKannada.com “This story was auto-published from a syndicated feed & Website. […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links