‘ಸುವರ್ಣತ್ರಿಭುಜ’ ದೋಣಿ ಅವಶೇಷ ಮೇಲೆತ್ತಲು ಕೇಂದ್ರಕ್ಕೆ ಪತ್ರ: ಸಚಿವ ಪೂಜಾರಿ

Source Credit Oneindia.com

Karwar

oi-Devaraj Naik

By ಕಾರವಾರ ಪ್ರತಿನಿಧಿ

|

ಕಾರವಾರ, ಡಿಸೆಂಬರ್ 25: ‘ಸಮುದ್ರದಲ್ಲಿ ಮುಳುಗಡೆಯಾದ ಉತ್ತರ ಕನ್ನಡ ಜಿಲ್ಲೆಯ ಒಟ್ಟು ಏಳು ಮೀನುಗಾರರಿದ್ದ ಸುವರ್ಣ ತ್ರಿಭುಜ ಯಾಂತ್ರಿಕ ದೋಣಿಯ ಅವಶೇಷವನ್ನು ಮೇಲೆತ್ತಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡ ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಅವಶೇಷ ಮೇಲೆತ್ತುವುದರಿಂದ ಸಂತ್ರಸ್ತ ಕುಟುಂಬಕ್ಕೆ ಸಮಾಧಾನ ಸಿಗಲಿದೆ. ಈಗಾಗಲೇ ಈ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಪರಿಹಾರಗಳನ್ನು ನೀಡಲಾಗಿದೆ’ ಎಂದರು.

ಕಾಣೆಯಾದ ಮೀನುಗಾರ ಕುಟುಂಬದ 28 ಲಕ್ಷ ರೂ. ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ವಿಶೇಷವಾಗಿ ಕಾಳಜಿ ತೋರಿದ್ದರು. ಈ ಕುರಿತಂತೆ ಯಾವ ಸ್ಥಿತಿಗತಿ ಇದೆ ಎಂಬುದನ್ನು ವರದಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

’12 ನಾಟಿಕಲ್ ಮೈಲು ದಾಟಿ ಕರ್ನಾಟಕ ಗಡಿಯಲ್ಲಿ ಮೀನುಗಾರಿಕೆಗೆ ಬರುವ ಗೋವಾ ಸೇರಿದಂತೆ ಇತರ ಮೀನುಗಾರರ ಚಟುವಟಿಕೆಯನ್ನು ನಿಯಂತ್ರಿಸಬೇಕು. ನಮ್ಮ ಮೀನುಗಾರರಿಗೆ ಲೈಟ್ ಫಿಶಿಂಗ್ ನಿರ್ಬಂಧಿಸಿ, ನೆರೆ ರಾಜ್ಯದವರು ಅದನ್ನು ನಡೆಸುವುದರಿಂದ ನಮ್ಮ ಮೀನುಗಾರರಿಗೆ ಅನ್ಯಾಯವಾಗಲಿದೆ. ಅಲ್ಲದೇ, ಮೀನಿನ ಸಂತತಿ ನಾಶವಾಗಿ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು’ ಎಂದು ಸೂಚಿಸಿದರು.

ಮೀನುಗಾರಿಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣ ತಮ್ಮ ಗಮನಕ್ಕೆ ತಂದು, ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದ ಅವರು, ಮೀನುಗಾರರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಂತೆ ಸೂಚಿಸಿದರು.

ಸಭೆಯಲ್ಲಿ ಕಾರವಾರ ಶಾಸಕಿ ರೂಪಾಲಿ ಎಸ್.ನಾಯ್ಕ್, ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್ ಕೆ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ನಾಗರಾಜ್, ಬಂದರು ಅಧಿಕಾರಿ ಕ್ಯಾಪ್ಟನ್ ಸಿ.ಸ್ವಾಮಿ, ಮುಜರಾಯಿ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಅಟಲ್ ಭೂಜಲ ಯೋಜನೆ; ಕರ್ನಾಟಕದ 14 ಜಿಲ್ಲೆಗಳು ಆಯ್ಕೆ

Wed Dec 25 , 2019
Source Credit Oneindia.com Pin it Email https://nirantharanews.com/%e0%b2%b8%e0%b3%81%e0%b2%b5%e0%b2%b0%e0%b3%8d%e0%b2%a3%e0%b2%a4%e0%b3%8d%e0%b2%b0%e0%b2%bf%e0%b2%ad%e0%b3%81%e0%b2%9c-%e0%b2%a6%e0%b3%8b%e0%b2%a3%e0%b2%bf-%e0%b2%85%e0%b2%b5%e0%b2%b6/#eGdfYXJyb3cuanB Karnataka oi-Gururaj S | Updated: Tuesday, December 24, 2019, 22:37 [IST] ಬೆಂಗಳೂರು, ಡಿಸೆಂಬರ್ 24 : ‘ಅಟಲ್ ಭೂಜಲ ಯೋಜನೆ’ಗೆ ಕರ್ನಾಟಕದ 14 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ. ಭೂ-ಜಲ ಸಂಪನ್ಮೂಲ ಸಂರಕ್ಷಣೆ, ಸದ್ಬಳಕೆ ಹಾಗೂ ನಿರ್ವಹಣೆ ಉದ್ದೇಶದಿಂದ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links