ಹಗ್ಗ ಜಗ್ಗಾಟದಲ್ಲಿ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ; ಸಿದ್ದರಾಮಯ್ಯ ಎಂಟ್ರಿ

Source Credit Oneindia.com

Chikkamagaluru

oi-Chetan BP

By ಚಿಕ್ಕಮಗಳೂರು ಪ್ರತಿನಿಧಿ

|

ಚಿಕ್ಕಮಗಳೂರು, ಜನವರಿ 9: ಚಿಕ್ಕಮಗಳೂರಿನ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಒಂದು ದಿನ ಮಾತ್ರ ಉಳಿದಿದೆ. ಆದರೆ ನಾಳೆ ಶೃಂಗೇರಿಯಲ್ಲಿ ನಡೆಯಲಿರುವ ಈ ಸಾಹಿತ್ಯ ಹಬ್ಬ ಆರಂಭಕ್ಕೂ ಮುನ್ನವೇ ಗೊಂದಲದಲ್ಲಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವುದು ಹಲವು ವಿರೋಧಗಳನ್ನು ಹುಟ್ಟುಹಾಕಿದೆ. ಜಿಲ್ಲಾ ಉಸ್ತುವಾರಿ ಸಚಿವ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿರುವುದು ಇನ್ನಷ್ಟು ಗೊಂದಲದ ವಾತಾವರಣವನ್ನು ಮೂಡಿಸಿದೆ.

“ಸಾಹಿತ್ಯ ಸಮ್ಮೇಳನಗಳು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಸಮ್ಮೇಳನ ಅಧ್ಯಕ್ಷರ ಆಯ್ಕೆಗೆ ನನ್ನ ವಿರೋಧವಿದೆ. ಇದು ವ್ಯಕ್ತಿಗತ, ವೈಚಾರಿಕ ವಿರೋಧ ಅಲ್ಲ, ಅಧ್ಯಕ್ಷರು ನಕ್ಸಲ್ ಹಿನ್ನೆಲೆ ಇರುವುದರಿಂದ ವಿರೋಧವಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬ್ಯಾಲೆಟ್ ಮೇಲೆ ನಂಬಿಕೆ ಇಟ್ಟಿದೆ. ನಕ್ಸಲರು ಬುಲೆಟ್ ಮೇಲೆ ನಂಬಿಕೆ ಇಟ್ಟಿದ್ದಾರೆ, ಹಾಗಾಗಿ ವಿರೋಧ ಮಾಡಲಾಗುತ್ತಿದೆ” ಎಂದು ಹೇಳಿಕೆ ನೀಡಿದ್ದರು.

ಸಮ್ಮೇಳನಕ್ಕೆ ಪರ – ವಿರೋಧ ಇರುವುದರಿಂದ ಜಿಲ್ಲಾಡಳಿತ ಅನುದಾನದ ಬಗ್ಗೆಯೂ ಚರ್ಚೆ ಮಾಡುತ್ತಿದೆ.

ಈ ವಿವಾದಕ್ಕೆ ಟ್ವಿಟರ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಎಂಟ್ರಿ ಕೊಟ್ಟಿದ್ದಾರೆ. “ತಮ್ಮ ಪಕ್ಷದ ರಾಜಕೀಯ ಸಿದ್ಧಾಂತ ಒಪ್ಪದಿರುವವರು ಅಧ್ಯಕ್ಷರಾಗಿರುವ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನಿರಾಕರಿಸಿರುವ ಸಚಿವ ಸಿ.ಟಿ.ರವಿ ನಿರ್ಧಾರ ಕನ್ನಡ ನಾಡು ನುಡಿಗೆ ಬಗೆದ ದ್ರೋಹ” ಎಂದು ಟ್ವೀಟ್ ಮಾಡಿದ್ದಾರೆ.

ಸಮ್ಮೇಳನಾಧ್ಯಕ್ಷರನ್ನು ಬದಲಿಸಲು ಒತ್ತಾಯಿಸಿ ಸಂಘ ಪರಿವಾರದಿಂದ ನಾಳೆ ಶೃಂಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಸಾಹಿತ್ಯ ಸಮ್ಮೇಳನದಲ್ಲಿ ಸರ್ಕಾರದ ಹಸ್ತಕ್ಷೇಪ ಖಂಡಿಸಿ ಶೃಂಗೇರಿಯಲ್ಲಿ ಸಾಹಿತಿಗಳು ಇಂದು ನಿರಶನ ಕೈಗೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯಗೆ ಕಂದಾಯ ಸಚಿವ ಅಶೋಕ್ ಓಪನ್ ಚಾಲೆಂಜ್

Fri Jan 10 , 2020
Source Credit Oneindia.com Pin it Email https://nirantharanews.com/%e0%b2%b9%e0%b2%97%e0%b3%8d%e0%b2%97-%e0%b2%9c%e0%b2%97%e0%b3%8d%e0%b2%97%e0%b2%be%e0%b2%9f%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%9a%e0%b2%bf%e0%b2%95%e0%b3%8d%e0%b2%95%e0%b2%ae%e0%b2%97/#Wg== Udupi oi-Abdul Raheem By ಉಡುಪಿ ಪ್ರತಿನಿಧಿ | Published: Wednesday, January 8, 2020, 17:41 [IST] ಉಡುಪಿ, ಜನವರಿ 8: “ಭಾರತ್ ಬಂದ್ ಕರೆಯುವ ಅವಶ್ಯಕತೆ ಇರಲಿಲ್ಲ. 50- 60 ವರ್ಷದ ಹಿಂದಿನ ಬೇಡಿಕೆಗಳಿಗೆ ಅರ್ಥ ಇಲ್ಲ. ಬಂದ್ ಕರೆ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಆಗುತ್ತೆ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಉಡುಪಿಯಲ್ಲಿ ಬಂದ್ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, “ಕಮ್ಯೂನಿಸ್ಟ್ ಪ್ರೇರಿತ ಬಂದ್ ಹೇರಿಕೆ ಸರಿಯಲ್ಲ, […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links