ಹುಬ್ಬಳ್ಳಿ ಟು ಬೆಂಗಳೂರು; ರೈಲಿನಲ್ಲಿ ಇನ್ನು ಐದೇ ತಾಸು?

Source Credit Oneindia.com

Hubballi

oi-Puttappa Koli

|

ಬೆಂಗಳೂರು, ಡಿಸೆಂಬರ್ 18: ರೈಲಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ 5 ಗಂಟೆಯಲ್ಲಿ ಸಂಚರಿಸಲು ಸಾಧ್ಯವೇ ಎಂಬುದನ್ನು ಅಧ್ಯಯನ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸರೇಶ್ ಅಂಗಡಿ ಹೇಳಿದ್ದಾರೆ.

ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿ (ಆರ್ ಆರ್ ಬಿ) ಉಪ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಿಗಳು ಅಧ್ಯಯನ, ಪರಿಶೀಲನೆ ನಡೆಸಿದ ನಂತರ ರೈಲು ಸಂಚಾರ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಪೂರ್ತಿ ಜೋಡಿ ಮಾರ್ಗವಿಲ್ಲ, ಇರುವ ಸೌಲಭ್ಯದಲ್ಲಿ ಈ ರೈಲನ್ನು ಓಡಿಸಲು ಸಾಧ್ಯವೇ ಎಂದು ಪರಿಶೀಲಿಸುತ್ತಿದ್ದೇವೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು.

ಇದೇ ಸಂಧರ್ಭದಲ್ಲಿ ಮಂಗಳೂರು-ಬೆಂಗಳೂರು, ಬೀದರ್-ಕಲಬುರ್ಗಿ, ಬೀದರ್-ಬೆಂಗಳೂರು ರೈಲು ಪ್ರಾರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆಯನ್ನು, ಆದಷ್ಟು ಶೀಘ್ರದಲ್ಲಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸದ್ಯ ಕರ್ನಾಟಕದಲ್ಲಿ ದಾವಣಗೆರೆ-ತುಮಕೂರು ಹಾಗೂ ಬಾಗಲಕೋಟೆ-ಕುಡಚಿ ಮಾರ್ಗದಲ್ಲಿ ಜೋಡಿ ಮಾರ್ಗದ ನಿರ್ಮಾಣಕ್ಕೆ ಭೂಸ್ವಾಧೀನದ ಸಮಸ್ಯೆಯಿದೆ. ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದರು.

ಬೆಳಗಾವಿಯ ಕಿತ್ತೂರನ್ನು ಎಕ್ಸ್ ಪೋರ್ಟ್ ಝೋನ್ ಮಾಡುವ ಯೋಜನೆಯಿದ್ದು, ರೈಲ್ವೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಮುಂದೆ ಬರುವ ಸಣ್ಣ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಬ್ರೇಕ್; ಬಿಜೆಪಿ ಮೇಲೆ ಎಚ್ಡಿಕೆ ಕಿಡಿ ಕಿಡಿ

Wed Dec 18 , 2019
Source Credit Oneindia.com Pin it Email https://nirantharanews.com/%e0%b2%b9%e0%b3%81%e0%b2%ac%e0%b3%8d%e0%b2%ac%e0%b2%b3%e0%b3%8d%e0%b2%b3%e0%b2%bf-%e0%b2%9f%e0%b3%81-%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%b0%e0%b3%88/#eDEtMTU3NjY4MDU ಕುಮಾರಸ್ವಾಮಿ ಕಿಡಿ ಕಿಡಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಯೋಜನೆಯನ್ನು ತಡೆಹಿಡಿದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಚುನಾವಣೆ ವೇಳೆ ಕಳಸಾ ಬಂಡೂರಿ ಮಹದಾಯಿ ಯೋಜನೆ ಬಗೆಹರಿಸುವುದಾಗಿ ವೋಟು ಹಾಕಿಸಿಕೊಂಡ ರಾಜ್ಯ ಬಿಜೆಪಿ ನಾಯಕರು ಇದೀಗ ಮೋದಿಗೆ ಹೆದರಿ ತಮ್ಮ ಧ್ವನಿಯನ್ನೇ ಕಳೆದುಕೊಂಡಿದ್ದಾರೆ. ಕರ್ನಾಟಕದ ಬಿಜೆಪಿ ಸಂಸದರು, ನಾಯಕರು ಕನ್ನಡಿಗರನ್ನು ದಾಸ್ಯಕ್ಕೆ ಈಡು ಮಾಡುವ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links