ಹುಬ್ಬಳ್ಳಿ-ಮುಂಬೈ ನಡುವೆ ಹೊಸ ವಿಮಾನ, ವೇಳಾಪಟ್ಟಿ

Source Credit Oneindia.com

Hubballi

oi-Gururaj S

|

ಹುಬ್ಬಳ್ಳಿ, ಜನವರಿ 25 : ಹುಬ್ಬಳ್ಳಿ ಮತ್ತು ಮುಂಬೈ ನಡುವೆ ನೇರ ವಿಮಾನ ಸೇವೆ ಆರಂಭವಾಗುತ್ತಿದೆ. ಹಲವು ವಿಮಾನಯಾನ ಸಂಸ್ಥೆಗಳು ವಿವಿಧ ನಗರಗಳಿಂದ ಹುಬ್ಬಳ್ಳಿಗೆ ಈಗಾಗಲೇ ಸಂಪರ್ಕ ಕಲ್ಪಿಸುತ್ತಿವೆ.

ಇಂಡಿಗೋ ಹುಬ್ಬಳ್ಳಿ-ಮುಂಬೈ ನಡುವೆ ನೇರ ವಿಮಾನ ಸೇವೆಯನ್ನು ಆರಂಭಿಸಲಿದೆ. 2020ರ ಮಾರ್ಚ್ 29ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏರ್ ಬಸ್ ಎ320 ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ.

ವೇಳಾಪಟ್ಟಿ : ಹುಬ್ಬಳ್ಳಿ-ಮುಂಬೈ ನಡುವಿನ ವಿಮಾನ ಹಾರಾಟದ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹುಬ್ಬಳ್ಳಿಯಿಂದ ಬೆಳಗ್ಗೆ 11.25ಕ್ಕೆ ಹೊರಡುವ ವಿಮಾನ 12.50ಕ್ಕೆ ಮುಂಬೈ ತಲುಪಲಿದೆ.

ಮಧ್ಯಾಹ್ನ 1.30ಕ್ಕೆ ಮುಂಬೈನಿಂದ ಹೊರಡುವ ವಿಮಾನ 2.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಟಿಕೆಟ್ ಬುಕ್ ಮಾಡಲು ಇಂಡಿಯೋ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹುಬ್ಬಳ್ಳಿ ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಮಾ ನಿಲ್ದಾಣವಾಗಿದೆ. 2016ರಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ನೂತನ ಟರ್ಮಿನಲ್ ಕಟ್ಟಡ ನಿರ್ಮಾಣ ಮಾಡಲಾಗಿದ್ದು, 2, 600 ಮೀಟರ್‌ಗೆ ರನ್‌ ವೇ ವಿಸ್ತರಣೆ ಮಾಡಲಾಗಿದೆ.

ಸ್ಟಾರ್ ಏರ್, ಏರ್ ಇಂಡಿಯಾ ಸೇರಿದಂತೆ ವಿವಿಧ ವಿಮಾನಯಾನ ಸಂಸ್ಥೆಗಳು ವಿವಿಧ ನಗರಗಳಿಂದ ಹುಬ್ಬಳ್ಳಿಗೆ ವಿಮಾನ ಸೇವೆಯನ್ನು ಒದಗಿಸುತ್ತಿವೆ. ತಿರುಪತಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸಂಪರ್ಕವಿದೆ.

Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ.

Allow Notifications

You have already subscribed

Source Credit Oneindia.com

“This story was auto-published from a syndicated feed & Website. No part of the story has been edited by Niranthara News”

Niranthara News

Leave a Reply

Your email address will not be published. Required fields are marked *

Next Post

ಪೌರತ್ವ ಕಾಯ್ದೆಯಿಂದ ದೇಶದ ಒಬ್ಬನೇ ಒಬ್ಬ ಮುಸ್ಲಿಂಗೆ ತೊಂದರೆಯಾದರೇ ಅದರ ಹೊಣೆ ಕೇಂದ್ರ ಸರಕಾರ ಹೋರುತ್ತದೆ

Mon Jan 27 , 2020
Source Credit TheMangaloreMirror.in ಪೌರತ್ವ ಕಾಯ್ದೆಯಿಂದ ದೇಶದ ಒಬ್ಬನೇ ಒಬ್ಬ ಮುಸ್ಲಿಂಗೆ ತೊಂದರೆಯಾದರೇ ಅದರ ಹೊಣೆ ಕೇಂದ್ರ ಸರಕಾರ ಹೋರುತ್ತದೆ ಮಂಗಳೂರು ಜನವರಿ 27:ಪೌರತ್ವ ಕಾಯ್ದೆಯಿಂದ ನಮ್ಮ ದೇಶದ ಒಬ್ಬನೇ ಒಬ್ಬ ಮುಸ್ಲಿಂ ವ್ಯಕ್ತಿಗೆ ತೊಂದರೆ ಆದರೆ ಅದಕ್ಕೆ ಕೇಂದ್ರ ಸರಕಾರವೇ ಹೊಣೆ ಹೋರುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. Pin it Email https://nirantharanews.com/%e0%b2%b9%e0%b3%81%e0%b2%ac%e0%b3%8d%e0%b2%ac%e0%b2%b3%e0%b3%8d%e0%b2%b3%e0%b2%bf-%e0%b2%ae%e0%b3%81%e0%b2%82%e0%b2%ac%e0%b3%88-%e0%b2%a8%e0%b2%a1%e0%b3%81%e0%b2%b5%e0%b3%86-%e0%b2%b9%e0%b3%8a/#eUg1QkFFQUFBQUF ಮಂಗಳೂರಿನಲ್ಲಿ ಇಂದು ನಡೆದ ಸಿಎಎ ಪರ ಸಮಾವೇಶದಲ್ಲಿ ಮಾತನಾಡಿದ ಅವರು ನೆರೆಯ ಪಾಕಿಸ್ಥಾನ, ಬಾಂಗ್ಲಾ, ಅಫ್ಘಾನಿಸ್ತಾನ ಮುಸ್ಲಿಂ ರಾಷ್ಟ್ರಗಳಾಗಿದ್ದು ಆ ದೇಶಗಳಿಗೆ ಅವರ […]

Now Available on

Play Store

Niranthara News is ready to serve you with all the updates happening around in all regions. Stay tuned with niranthara news and get all the news in one touch.

Quick Links